BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಕಲಬುರ್ಗಿ: ಕಲಬುರ್ಗಿ ನಗರಸಭೆ ಅಧ್ಯಕ್ಷೆ ಅಂಜಲಿ ಪತಿ, ಕಾಂಗ್ರೆಸ್ ಮುಖಂಡ ಗಿರೀಶ್ ಕಂಬನೂರ್ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಜುಲೈ 12ರಂದು ಕಲಬುರ್ಗಿಯ ಶಾಹಬಾದ್ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಗಿರೀಶ್ ಕಂಬನೂರ್ ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಆರೋಪಿಗಳ ಪತ್ತೆಗಾಗಿ ಕಲಬುರ್ಗಿ ಪೊಲೀಸರು ಬಲೆ ಬೀಸಿದ್ದರು.
ಇಂದು ಶಾಹಬಾದ್ ಪಟ್ಟಣದ ಹೊರವಲಯದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ. ಪಿ ಎಸ್ ಐ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.