Thursday, August 11, 2022
Google search engine
HomeUncategorizedBIG NEWS: ಕಾಲೇಜು ವಿದ್ಯಾರ್ಥಿನಿಯರು ನಾಪತ್ತೆ ಕೇಸ್; ಇಬ್ಬರು ವಿದ್ಯಾರ್ಥಿನಿಯರು ಪತ್ತೆ

BIG NEWS: ಕಾಲೇಜು ವಿದ್ಯಾರ್ಥಿನಿಯರು ನಾಪತ್ತೆ ಕೇಸ್; ಇಬ್ಬರು ವಿದ್ಯಾರ್ಥಿನಿಯರು ಪತ್ತೆ

BIG NEWS: ಕಾಲೇಜು ವಿದ್ಯಾರ್ಥಿನಿಯರು ನಾಪತ್ತೆ ಕೇಸ್; ಇಬ್ಬರು ವಿದ್ಯಾರ್ಥಿನಿಯರು ಪತ್ತೆ

ರಾಯಚೂರು: ರಾಯಚೂರು ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ವಿದ್ಯಾರ್ಥಿನಿಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ರೈಲ್ವೆ ಪೊಲೀಸರಿಂದ ಇಬ್ಬರನ್ನು ರಕ್ಷಿಸಲಾಗಿದ್ದು, ವಿಚಾರಣೆ ಬಳಿಕ ವಿದ್ಯಾರ್ಥಿನಿಯರನ್ನು ಹುಬ್ಬಳ್ಳಿ ಶಹರ ಪೊಲೀಸರುಗೆ ಒಪ್ಪಿಸಿದ್ದಾರೆ.

ಇನ್ನಿಬ್ಬರು ವಿದ್ಯಾರ್ಥಿನಿಯರಿಗಾಗಿ ಶೋಧ ಮುಂದುವರೆದಿದೆ. ಜುಲೈ 23ರಂದು ರಾಯಚೂರು ನಗರದ ಬಾಲಕಿಯರ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದರು. ಎರಡು ದಿನಗಳಿಂದ ಹುಡುಕಾಟ ನಡೆಸಿದರೂ ಪತ್ತೆಯಾಗದ ಮಕ್ಕಳ ಬಗ್ಗೆ ಆತಂಕಗೊಂಡ ಪೋಷಕರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು ಎರಡು ವಿಶೇಷ ತಂಡ ರಚನೆ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments