BIG NEWS: ಕೂಸು ಹುಟ್ಟುವ ಮುನ್ನವೇ ಕುಲಾವಿ…; ಅವರಪ್ಪನಾಣೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದ ಆರೋಗ್ಯ ಸಚಿವ
ಬೆಂಗಳೂರು: ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಇನ್ನೂ ಚುನಾವಣೆಯೇ ಆಗಿಲ್ಲ. ಆಗಲೇ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು, ಮಗು ಹುಟ್ಟಿಲ್ಲ, ಈಗಲೇ ಕುಲಾವಿ ಹೊಲಿಸಿದಂತಿದೆ ಕಾಂಗ್ರೆಸ್ ನಾಯಕರ ಕಿತ್ತಾಟ ಎಂದು ಹೇಳಿದರು.
ಕಾಂಗ್ರೆಸ್ ನಾಯಕರಿಗೆ ಯಾವ ಶಾಸ್ತ್ರದವರು ಹೇಳಿದ್ದಾರೋ ಗೊತ್ತಿಲ್ಲ. ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ. ಚುನಾವಣೆಗೆ ಇನ್ನೂ ಸಮಯವಿದೆ. ಚುನಾವಣೆ ಬಗ್ಗೆ ಗಮನಕೊಡುವ ಬದಲು ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕಿತ್ತಾಟ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.