BIG NEWS: ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರ ಮನೆ ಮೇಲೂ ಲೋಕಾಯುಕ್ತ ದಾಳಿ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮ-KSDL ಅಧ್ಯಕ್ಷ ಮತ್ತು ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ವ್ಯವಸ್ಥಾಪಕ ನಿರ್ದೇಶಕರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದರ ಬೆನ್ನಲ್ಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆಯ ಚೆನ್ನಗಿರಿಯಲ್ಲಿನ ಚನ್ನೇಶಪುರ ಗ್ರಾಮದ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸುವ ಸಾಧ್ಯತೆ ಇದೆ.