BIG NEWS: ಗುತ್ತಿಗೆದಾರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಗುತ್ತಿಗೆದಾರ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ ವೇತನ ಶೇ.15 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಪಿ.ಎನ್. ಶ್ರೀನಿವಾಸಾಚಾರಿ ಸಮಿತಿ ಶಿಫಾರಸಿನ ಅನ್ವಯ ಏಪ್ರಿಲ್ 1ರಿಂದ ನೂತನ ಪರಿಷ್ಕೃತ ವೇತನ ಜಾರಿಗೆ ಬರಲಿದೆ.
ಇದರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ 25 ಸಾವಿರಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಅನುಕೂಲವಾಗಲಿದೆ.