BIG NEWS: ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ಹೆಚ್ಚುತ್ತಿದೆ. ಒಂದೆಡೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದರೆ, ಇದೀಗ ಅಂಗನವಾಡಿ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಒಟ್ಟಾರೆ ರಾಜ್ಯ ಸರ್ಕಾರಕ್ಕೆ ವಿಧಾನಸಭಾ ಚುನಾವಣೆ ಹೊತ್ತಲ್ಲೇ ಹಲವು ಪ್ರತಿಭಟನೆಗಳ ಬಿಸಿ ತಟ್ಟಿದೆ.