Thursday, February 2, 2023
Google search engine
HomeUncategorizedBIG NEWS: ಜನವರಿ 16ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ; ಮಹಿಳೆಯರಿಗಾಗಿ ಕಾಂಗ್ರೆಸ್ ವಿಶೇಷ ಪ್ರಣಾಳಿಕೆ ಬಿಡುಗಡೆ

BIG NEWS: ಜನವರಿ 16ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ; ಮಹಿಳೆಯರಿಗಾಗಿ ಕಾಂಗ್ರೆಸ್ ವಿಶೇಷ ಪ್ರಣಾಳಿಕೆ ಬಿಡುಗಡೆ

BIG NEWS: ಜನವರಿ 16ರಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ; ಮಹಿಳೆಯರಿಗಾಗಿ ಕಾಂಗ್ರೆಸ್ ವಿಶೇಷ ಪ್ರಣಾಳಿಕೆ ಬಿಡುಗಡೆ

ಹಾಸನ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಈಗಾಗಲೇ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಸರಣಿ ಸಮಾವೇಶಗಳನ್ನು ನಡೆಸಲು ಮುಂದಾಗಿದ್ದಾರೆ. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಜನವರಿ 16ರಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ ಆಗ್ರಮಿಸಲಿದ್ದು, ನಾಯಕಿ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದು, ಅಂದು ಮಹಿಳೆಯರಿಗಾಗಿ ವಿಶೇಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.

ಇಡೀ ರಾಜ್ಯದಿಂದ 50 ಸಾವಿರಕ್ಕೂ ಹೆಚ್ಚು ಮಹಿಳಾ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಹಿಳೆಯರಿಗಾಗಿ ಕಾಂಗ್ರೆಸ್ ವಿಶೇಷವಾದ ಹಾಗೂ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments