Wednesday, August 17, 2022
Google search engine
HomeUncategorizedBIG NEWS: ಜಾರಿ ನಿರ್ದೇಶನಾಲಯದಿಂದ ಇಂದು ಸೋನಿಯಾ ಗಾಂಧಿ ವಿಚಾರಣೆ

BIG NEWS: ಜಾರಿ ನಿರ್ದೇಶನಾಲಯದಿಂದ ಇಂದು ಸೋನಿಯಾ ಗಾಂಧಿ ವಿಚಾರಣೆ

BIG NEWS: ಜಾರಿ ನಿರ್ದೇಶನಾಲಯದಿಂದ ಇಂದು ಸೋನಿಯಾ ಗಾಂಧಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಲಯದ ಅಧಿಕಾರಿಗಳು ಇಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಅವರ ಪುತ್ರ ರಾಹುಲ್ ಗಾಂಧಿಯವರ ವಿಚಾರಣೆಯನ್ನು ನಡೆಸಲಾಗಿದೆ.

ಸೋನಿಯಾ ಗಾಂಧಿಯವರು ವಿಚಾರಣೆಗೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಕಾಂಗ್ರೆಸ್ ಕಚೇರಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಇಂದು ಸಂಚಾರ ಅಸ್ತವ್ಯಸ್ತವಾಗಬಹುದು ಎನ್ನಲಾಗಿದೆ.

ಈ ಮೊದಲು ಜೂನ್ 8 ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ನೀಡಿದ್ದು, ಜೂನ್ 2ರಂದು ಅವರಿಗೆ ಕೋವಿಡ್ ಕಾಣಿಸಿಕೊಂಡ ಪರಿಣಾಮ ಜೂನ್ 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅಂತಿಮವಾಗಿ ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments