Monday, December 5, 2022
Google search engine
HomeUncategorizedBIG NEWS: ಟ್ರಕ್ ಹರಿದು 12 ಮಂದಿ ಸಾವು; ಪೂಜೆಯಲ್ಲಿ ಪಾಲ್ಗೊಂಡಿದ್ದಾಗಲೇ ದುರ್ಘಟನೆ

BIG NEWS: ಟ್ರಕ್ ಹರಿದು 12 ಮಂದಿ ಸಾವು; ಪೂಜೆಯಲ್ಲಿ ಪಾಲ್ಗೊಂಡಿದ್ದಾಗಲೇ ದುರ್ಘಟನೆ

BIG NEWS: ಟ್ರಕ್ ಹರಿದು 12 ಮಂದಿ ಸಾವು; ಪೂಜೆಯಲ್ಲಿ ಪಾಲ್ಗೊಂಡಿದ್ದಾಗಲೇ ದುರ್ಘಟನೆ

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಘೋರ ದುರಂತವೊಂದು ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿದ್ದ ದೇವಾಲಯ ಒಂದರಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಹರಿದು 12 ಮಂದಿ ಸಾವನ್ನಪ್ಪಿದ್ದಾರಲ್ಲದೆ ಹಲವರು ಗಾಯಗೊಂಡಿದ್ದಾರೆ.

ದೇಸ್ರೀ ಪೊಲೀಸ್ ಠಾಣಾ ವ್ಯಾಪ್ತಿಯ ನಯಗಾಂವ್ ಟೋಲಾ ಗ್ರಾಮದಲ್ಲಿ ರಾತ್ರಿ 9:00 ಸುಮಾರಿಗೆ ಹಾಜಿಪುರ -ಮಹಾನಾರ್ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಹೆದ್ದಾರಿಯ ಪಕ್ಕದಲ್ಲಿ ಇದ್ದ ದೇವಾಲಯದಲ್ಲಿ ಭಕ್ತರು ಪೂಜಾ ಕಾರ್ಯದಲ್ಲಿ ತೊಡಗಿದ್ದರು.

ಈ ವೇಳೆ ವೇಗವಾಗಿ ಬಂದ ಟ್ರಕ್ ಭಕ್ತರ ಗುಂಪಿನ ಮಧ್ಯೆ ನುಗ್ಗಿದ್ದು, ಇದರ ಪರಿಣಾಮ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ವೈಶಾಲಿಯಲ್ಲಿ ನಡೆದ ಅಪಘಾತ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸಾವಿಗೀಡಾದವರಿಗೆ ಸಂತಾಪ ಸೂಚಿಸಿ ಮೃತರ ಕುಟುಂಬದ ಸಮೀಪದ ಬಂಧುಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments