BIG NEWS: ನನ್ನ ಬಹಳ ವರ್ಷದ ಕನಸು ನನಸಾಗಿದೆ ಎಂದ ಮಾಜಿ ಸಿಎಂ ಬಿಎಸ್ ವೈ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಿಂದ ನಮಗೆ ಆನೆ ಬಲ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪ, ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ನನ್ನ ಬಹಳ ವರ್ಷಗಳ ಕನಸು ನನಸಾಗಿದೆ. ಅಭಿವೃದ್ಧಿಗೆ ಏನೆಲ್ಲ ಬೇಕೋ ಅದನ್ನೆಲ್ಲ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದರು.
ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ. ವೀರಶೈವ ಲಿಂಗಾಯಿತ ಬಂಧುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತೇನೆ ನಮಗೆ ಬೆಂಬಲ ನೀಡಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದ್ದಾರೆ.