BIG NEWS: ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ….? ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ
ಮೈಸೂರು: ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ ? ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನ ನಂಜನಗೂಡಿನಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಗೆದ್ದವನು ಈಗ ಪತ್ತೆಯಿಲ್ಲ, ಈಗ ಆತನನ್ನು ಒದ್ದು ಕಳುಹಿಸಿದ್ದಾರೆ. ಆತ ಈಗ ದನ ಮೇಯಿಸೋಕೆ ಹೋಗಿದ್ದಾನೆ. ಎಮ್ಮೆ ಮೇಯಿಸೋಕೆ ಹೋದನಾ ಗೊತ್ತಿಲ್ಲ ಎಂದು ಕಳಲೆ ಕೇಶವಮೂರ್ತಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಆತನ ಜಾಗಕ್ಕೆ ಬರಲು ಧ್ರುವನಾರಾಯಣ, ಮಹದೇವಪ್ಪ ಕಚ್ಚಾಡ್ತಿದ್ದಾರೆ. ಉಪಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಈಗ ಎಲ್ಲಿಗೆ ಹೋಗಿದ್ದಾರೆ? ಸಿದ್ದರಾಮಯ್ಯ ಪಂಚೆ ಕಟ್ಟಿಕೊಂಡು ಕೋಲಾರ ಕ್ಷೇತ್ರಕ್ಕೆ ಹೋದರು ಎಂದು ಕಿಡಿಕಾರಿದ್ದಾರೆ.