BIG NEWS: ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತ ಶವವಾಗಿ ಪತ್ತೆ
ದಕ್ಷಿಣ ಕನ್ನಡ: ಬಜರಂಗದಳ ಕಾರ್ಯಕರ್ತರೊಬ್ಬರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆ ಬಳಿ ನಡೆದಿದೆ.
26 ವರ್ಷದ ರಾಜೇಶ್ ಪೂಜಾರಿ ಮೃತ ಯುವಕ. ರಾಜೇಶ್ ಬಜರಂಗದಳ ಕಲ್ಲಡ್ಕ ಪ್ರಖಂಡ ಗೋರಕ್ಷಾ ಪ್ರಮುಖರಾಗಿದ್ದರು. ಇದೀಗ ನೇತ್ರಾವತಿ ನದಿಯಲ್ಲಿ ರಾಜೇಶ್ ಶವ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಸೇತುವೆ ಬಳಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ರಾಜೇಶ್ ಶವವನ್ನು ನದಿಯಿಂದ ಹೊರತೆಗೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.