Thursday, August 11, 2022
Google search engine
HomeUncategorizedBIG NEWS: ಪಶ್ಚಿಮಘಟ್ಟ ಸೂಕ್ಷ್ಮ ವಲಯ ಕರಡು ಅಧಿಸೂಚನೆಗೆ ವಿರೋಧ; ಸಭೆ ಕರೆದ ಗೃಹ ಸಚಿವ...

BIG NEWS: ಪಶ್ಚಿಮಘಟ್ಟ ಸೂಕ್ಷ್ಮ ವಲಯ ಕರಡು ಅಧಿಸೂಚನೆಗೆ ವಿರೋಧ; ಸಭೆ ಕರೆದ ಗೃಹ ಸಚಿವ ಅರಗ ಜ್ಞಾನೇಂದ್ರ

BIG NEWS: ಪಶ್ಚಿಮಘಟ್ಟ ಸೂಕ್ಷ್ಮ ವಲಯ ಕರಡು ಅಧಿಸೂಚನೆಗೆ ವಿರೋಧ; ಸಭೆ ಕರೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪಶ್ಚಿಮಘಟ್ಟ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಜುಲೈ 18ರಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಲೆನಾಡು ಭಾಗದ ಶಾಸಕರ ಸಭೆ ಕರೆದಿದ್ದಾರೆ.

ಪಶ್ಚಿಮಘಟ್ಟ ಸೂಕ್ಷ್ಮ ವಲಯ ವಿಚಾರವಾಗಿ ಕೇಂದ್ರ ಪರಿಸರ ಸಚಿವಾಲಯ ಕಳೆದ ವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಸೇರಿದಂತೆ ಒಟ್ಟು 56,826 ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 2 ತಿಂಗಳ ಗಡುವು ನೀಡಲಾಗಿದೆ. ಕಸ್ತೂರಿ ರಂಗನ್ ವರದಿ ಜಾರಿಗೂ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಜುಲೈ 18ರಂದು ನಡೆಯಲಿರುವ ಸಭೆಯಲ್ಲಿ ಶಾಸಕರು ಅಧಿಸೂಚನೆ ವಿರೋಧಿಸಿ ಗೊತ್ತುವಳಿ ಮಂಡಿಸಲಿದ್ದಾರೆ.

ಪಶ್ಚಿಮಘಟ್ಟ ಪ್ರದೇಶ ಸೂಕ್ಷ್ಮ ವಲಯ ಎಂದು ಘೋಷಿಸುವುದರಿಂದ ಆ ಭಾಗದಲ್ಲಿ ವಾಸವಾಗಿರುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಆ ಭಾಗದ ಜನರ ವಿರೋಧವಿದೆ. ಸರ್ಕಾರದ ವಿರೋಧವೂ ಇದೆ ಎಂದು ಈ ಹಿಂದೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments