BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್-ಕಾರು ಭೀಕರ ಅಪಘಾತ
ಶಿವಮೊಗ್ಗ: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಬಳಿ ನಡೆದಿದೆ.
ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ದಿದ್ದ ಬೆಂಗಳೂರಿನ ಶಾಲೆಯ ಬಸ್ ಹಾಗೂ ಮಾರುತಿ ಬಲೆನೋ ಕಾರಿನ ನಡುವೆ ಬೆನ್ನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಹಾಗೂ ಕಾರು ಜಖಂಗೊಂಡಿವೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಲ್ಲ.