BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಝಾಕಿರ್ ಹಾಗೂ ಶಫೀಕ್ ಎಂಬುವವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಕಸ್ಟಡಿಗೆ ಪಡೆದ ಪೊಲೀಸರು ಇದೀಗ ಆರೋಪಿಗಳನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.