BIG NEWS: ಫಾಜಿಲ್ ಹತ್ಯೆ ಪ್ರಕರಣ; 14 ಜನ ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, 14 ಜನ ಶಂಕಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ನಿನ್ನೆ 8:30ರ ಸುಮಾರಿಗೆ ಸುರತ್ಕಲ್ ನಲ್ಲಿ 23 ವರ್ಷದ ಯುವಕ ಫಾಜಿಲ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಎರಡು ಪ್ರತ್ಯೇಕ ತಂಡದಿಂದ ತನಿಖೆ ನಡೆಯುತ್ತಿದೆ ಎಂದರು.
ಈಗಾಗಲೇ 14 ಜನರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಸುರತ್ಕಲ್, ಮುಲ್ಕಿ, ಬಜ್ಪೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊದಲು ಹೊರದೇಶಗಳಲ್ಲಿ ಕುಳಿತು ಫೇಕ್ ಖಾತೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ.