Monday, December 5, 2022
Google search engine
HomeUncategorizedBIG NEWS: ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್ ?

BIG NEWS: ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್ ?

BIG NEWS: ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್ ?

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದರೂ ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಲೇ ಇರುವ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.

ಸ್ವ ಕ್ಷೇತ್ರದ ಜಿಲ್ಲೆ ಬೆಳಗಾವಿಯಲ್ಲಿಯೇ ಜನಸಂಕಲ್ಪ ಯಾತ್ರೆ ನಡೆದಿದ್ದರೂ ಜಾರಕಿಹೊಳಿ ಬ್ರದರ್ಸ್ ಸಮಾವೇಶಕ್ಕೆ ಗೈರಾಗಿದ್ದಾರೆ. ಸಮಾವೇಶಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಬಂದಿದ್ದರೂ ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಮಾತ್ರವಲ್ಲ ಮಹೇಶ್ ಕುಮಟಳ್ಳಿ ಕೂಡ ಗೈರಾಗುವ ಮೂಲಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ನಾಯಕರು ಭರವಸೆ ನೀಡಿದ್ದರು. ಆದರೆ ದೀಪಾವಳಿ ಮುಗಿದು 15 ದಿನಗಳಾದರೂ ಸಂಪುಟ ವಿಸ್ತರಣೆಯಾಗಿಲ್ಲ. ಹಾಗಾಗಿ ಜಾರಕಿಹೊಳಿ ಸಹೋದದರು ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಪಕ್ಷದ ಕಾರ್ಯಕ್ರಮದಿಂದಲೇ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments