Thursday, February 2, 2023
Google search engine
HomeUncategorizedBIG NEWS: ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ; ಕಾಂಗ್ರೆಸ್ ನಾಯಕರಿಂದ ಅದ್ದೂರಿ ಸ್ವಾಗತ

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ; ಕಾಂಗ್ರೆಸ್ ನಾಯಕರಿಂದ ಅದ್ದೂರಿ ಸ್ವಾಗತ

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ; ಕಾಂಗ್ರೆಸ್ ನಾಯಕರಿಂದ ಅದ್ದೂರಿ ಸ್ವಾಗತ

ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮನೆ ಮಾಡಿದೆ.

ವಿಧನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣೆ ಗೆಲ್ಲಲು ನಾನಾ ಕಸರತ್ತು ನಡೆಸಿದ್ದು, ಪಕ್ಷದ ನಾಯಕರನ್ನು ಕರೆಸುವ ಮೂಲಕ ಮತದಾರರ ಓಲೈಕೆಯಲ್ಲಿ ನಿರತರಾಗಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯಕದರ್ಶಿ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕಾ ಗಾಂಧಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನದೆಯಲಿರುವ ನಾ ನಾಯಕಿ ಕಾಂಗ್ರೆಸ್ ಮಹಿಳಾ ಸಮಾವೇಶವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದು, ಈ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಸಮಾವೇಶದಲ್ಲಿ ಮಹಿಳೆಯರಿಗಾಗಿ ವಿಶೇಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.
ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ಕಟೌಟ್‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments