Tuesday, September 27, 2022
Google search engine
HomeUncategorizedBIG NEWS: ಮಕ್ಕಳ ಕಳ್ಳರ ವದಂತಿ; ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಶಕ್ಕೆ

BIG NEWS: ಮಕ್ಕಳ ಕಳ್ಳರ ವದಂತಿ; ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಶಕ್ಕೆ

BIG NEWS: ಮಕ್ಕಳ ಕಳ್ಳರ ವದಂತಿ; ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಶಕ್ಕೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ಜಾಲ ಎಂಬ ವದಂತಿ ಹಬ್ಬಿದ್ದು, ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಹುಲಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುರಿಹುಂಡಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಇನ್ನು ಮಕ್ಕಳ ಕಳ್ಳರ ಜಾಲ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಎಸ್ ಪಿ ಆರ್. ಚೇತನ್ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲೆಯ ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಮಕ್ಕಳ ಕಳ್ಳತನ ಪ್ರಕರಣ ನಡೆದಿಲ್ಲ. ಬಂಧಿಸಲ್ಪಟ್ಟ ಇಬ್ಬರು ಮಕ್ಕಳ ಕಳ್ಳರಲ್ಲ. ಅವರು ಚಿಂದಿ ಆಯುವವರಾಗಿದ್ದು, ಇಬ್ಬರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳ ಕಳ್ಳರೆಂದು ಭಾವಿಸಿ ಜನರು ಅಮಾಯಕರ ಮೇಲೆ ಹಲ್ಲೆ ನಡೆಸಬಾರದು. ಯಾವುದೇ ಅನುಮಾನ ಬಂದರೂ 112 ಈ ಸಂಖ್ಯೆಗೆ ಕರೆ ಮಾಡಿ. ವದಂತಿ ಹಬ್ಬಿಸುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments