Wednesday, August 10, 2022
Google search engine
HomeUncategorizedBIG NEWS: ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ; ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್...

BIG NEWS: ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ; ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

BIG NEWS: ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ; ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು ಎನ್ನುವಾಗಲೇ ಇದೀಗ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments