Saturday, November 26, 2022
Google search engine
HomeUncategorizedBIG NEWS: ರೇಣುಕಾಚಾರ್ಯ ಕುಟುಂಬಕ್ಕೆ ಸಾಂತ್ವಾನ ಹೇಳಲು ನ.9 ರಂದು ಹೊನ್ನಾಳಿಗೆ ಸಿಎಂ ಬೊಮ್ಮಾಯಿ

BIG NEWS: ರೇಣುಕಾಚಾರ್ಯ ಕುಟುಂಬಕ್ಕೆ ಸಾಂತ್ವಾನ ಹೇಳಲು ನ.9 ರಂದು ಹೊನ್ನಾಳಿಗೆ ಸಿಎಂ ಬೊಮ್ಮಾಯಿ

BIG NEWS: ರೇಣುಕಾಚಾರ್ಯ ಕುಟುಂಬಕ್ಕೆ ಸಾಂತ್ವಾನ ಹೇಳಲು ನ.9 ರಂದು ಹೊನ್ನಾಳಿಗೆ ಸಿಎಂ ಬೊಮ್ಮಾಯಿ

ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತಂತೆ ಗೊಂದಲಗಳು ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತವರ ಕೆಲ ಸಚಿವ ಸಂಪುಟ ಸಹೋದ್ಯೋಗಿಗಳು ಹೊನ್ನಾಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ ಎಂದು ತಿಳಿದುಬಂದಿದೆ.

ನವೆಂಬರ್ 9 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಶ್ರೀರಾಮುಲು, ಆರ್. ಅಶೋಕ್, ಶಾಸಕ ರಾಜುಗೌಡ ಸೇರಿದಂತೆ ಹಲವರು ಹೊನ್ನಾಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದ್ದು, ಆ ದಿನದಂದೇ ಚಂದ್ರಶೇಖರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಇಟ್ಟುಕೊಳ್ಳುವ ಸಾಧ್ಯತೆ ಇದೆ.

ಇದರ ಮಧ್ಯೆ ಚಂದ್ರಶೇಖರ್ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಂದ್ರಶೇಖರ್ ನಾಪತ್ತೆಯಾಗುವ ಮುನ್ನ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಹೀಗಾಗಿ ಪೊಲೀಸರು ಅಲ್ಲಿಗೂ ತೆರಳಿ ವಿನಯ ಗುರೂಜಿಯವರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments