Sunday, January 29, 2023
Google search engine
HomeUncategorizedBIG NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರವಿ (22) ಹಾಗೂ ಆತನ ಸ್ನೇಹಿತ ವಿಕಾಸ್ (20) ಮೃತರು. ನವಲಗುಂದ ಮೂಲದ ಇಬ್ಬರು ಯುವಕರು ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಇಬ್ಬರೂ ಟ್ರೂ ವ್ಯಾಲ್ಯೂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಡ್ಯೂಟಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments