Tuesday, September 27, 2022
Google search engine
HomeUncategorizedBIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು; ಕಾರ್ಯಕ್ರಮಗಳ ಪಟ್ಟಿ ರಿಲೀಸ್

BIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು; ಕಾರ್ಯಕ್ರಮಗಳ ಪಟ್ಟಿ ರಿಲೀಸ್

BIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು; ಕಾರ್ಯಕ್ರಮಗಳ ಪಟ್ಟಿ ರಿಲೀಸ್

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿಗಳ ಕಾರ್ಯಕ್ರಮಗಳ ಬಗ್ಗೆ ಸರ್ಕಾರದಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್ 26ರಂದು ಬೆಳಿಗ್ಗೆ 6.15ಕ್ಕೆ ದೆಹಲಿಯಿಂದ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಬರಲಿರುವ ರಾಷ್ಟ್ರಪತಿ ಮುರ್ಮು ಬಳಿಕ ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ನಾಡ ಅಧಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಭಾಗವಹಿಸಲಿರುವ ರಾಷ್ಟ್ರಪತಿಗಳು ಬಳಿಕ ಬೆಳಿಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಡಲಿದ್ದಾರೆ. 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments