BIG NEWS: ಶಾಲೆಗಳ ಮೇಲೆ 3 ದಿನಗಳು ರಾಷ್ಟ್ರಧ್ವಜ ಹಾರಾಟ ಕಡ್ಡಾಯ
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಶಾಲೆಗಳ ಮೇಲೆ 3 ದಿನಗಳ ಕಾಲ ರಾಷ್ಟ್ರಧ್ವಜ ಹಾರಾಟ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.
75ನೇ ವರ್ಷದ ಸ್ವಾತಂತ್ರ್ಯೊತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ. ಆಗಸ್ಟ್ 11ರಿಂದ 17ರವರೆಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.