BIG NEWS: ಸಂಸದೆ ಸುಮಲತಾ ನಾಳೆ ಬಿಜೆಪಿ ಸೇರ್ತಾರೆ; JDS ಶಾಸಕ ಪುಟ್ಟರಾಜು ಮಾಹಿತಿ
ಮೈಸೂರು: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜ್ಯ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಅಲ್ಲದೇ ಇತ್ತೀಚೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಮೂಲಕ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ನಾಳೆಯೇ ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಈ ವಿಚಾರ ಬಹಿರಂಗಪಡಿಸಿದ್ದಾರೆ. ಸಂಸದೆ ಸುಮಲತಾ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಮಂಡ್ಯ ಭೇಟಿ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಪ್ಲಾನ್ ಮಾಡಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ಅವಕಾಶ ಸಿಗಲಿಲ್ಲ. ಆ ಕಾರಣಕ್ಕಾಗಿ ನಾಳೆ ಸುಮಲತಾ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.