Saturday, November 26, 2022
Google search engine
HomeUncategorizedBIG NEWS: ಸರ್ವೋದಯ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೂಕಾಟ-ತಳ್ಳಾಟ; ಪೊಲೀಸರೊಂದಿಗೆ ವಾಗ್ವಾದ

BIG NEWS: ಸರ್ವೋದಯ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೂಕಾಟ-ತಳ್ಳಾಟ; ಪೊಲೀಸರೊಂದಿಗೆ ವಾಗ್ವಾದ

BIG NEWS: ಸರ್ವೋದಯ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೂಕಾಟ-ತಳ್ಳಾಟ; ಪೊಲೀಸರೊಂದಿಗೆ ವಾಗ್ವಾದ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದು, ಖರ್ಗೆ ಸ್ವಾಗತಕ್ಕೆ ರಾಜ್ಯ ಕಾಂಗ್ರೆಸ್ ಸರ್ವೋದಯ ಸಮಾವೇಶ ನಡೆಸುತ್ತಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆರಂಭವಾಗಿದ್ದು, ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶಕ್ಕೆ ಹರಿದು ಬಂದಿದ್ದಾರೆ. ಈ ವೇಳೆ ಸಮಾವೇಶದ ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಅರಮನೆ ಮೈದಾನದ ಒಳಗೆ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಾಗೂ ಪೊಲೀಸರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

ಮಾಜಿ ಸಚಿವ ಎಂ.ಬಿ.ಪಾಟಿಲ್ ಹಾಗೂ ಇತರ ನಾಯಕರು ವೇದಿಕೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments