BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿ; ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಡೂರಿನ ಕಂಪ ಪ್ರದೇಶದಲ್ಲಿ ನಡೆದಿದೆ.
23 ವರ್ಷದ ಯುವತಿ ಜಯಶ್ರೀ ಹತ್ಯೆಯಾದವರು. ಮನೆಯಲ್ಲಿ ಯುವತಿಯೊಬ್ಬರೇ ಇದ್ದ ಸಂದರ್ಭದಲ್ಲಿ ದುಷ್ಕರ್ಮಿ ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾನೆ.
ಸಂಪ್ಯಾ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.