Thursday, August 11, 2022
Google search engine
HomeUncategorizedBJP ಗೆ ಸೆಡ್ಡು ಹೊಡೆಯುತ್ತಾ ಹೊಸ ರಾಜಕೀಯ ಪಕ್ಷ ? ಹಿಂದೂಸ್ಥಾನ ಜನತಾ ಪಾರ್ಟಿ ನಾಳೆ...

BJP ಗೆ ಸೆಡ್ಡು ಹೊಡೆಯುತ್ತಾ ಹೊಸ ರಾಜಕೀಯ ಪಕ್ಷ ? ಹಿಂದೂಸ್ಥಾನ ಜನತಾ ಪಾರ್ಟಿ ನಾಳೆ ಅಸ್ತಿತ್ವಕ್ಕೆ; ಮಠಾಧೀಶರಿಂದಲೇ ಚಾಲನೆ

BJP ಗೆ ಸೆಡ್ಡು ಹೊಡೆಯುತ್ತಾ ಹೊಸ ರಾಜಕೀಯ ಪಕ್ಷ ? ಹಿಂದೂಸ್ಥಾನ ಜನತಾ ಪಾರ್ಟಿ ನಾಳೆ ಅಸ್ತಿತ್ವಕ್ಕೆ; ಮಠಾಧೀಶರಿಂದಲೇ ಚಾಲನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಸೆಡ್ದು ಹೊಡೆಯುವ ನಿಟ್ಟಿನಲ್ಲಿ ಹೊಸದೊಂದು ರಾಜಕೀಯ ಪಕ್ಷ ಉದಯವಾಗಲಿದ್ದು, ನಾಳೆ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ.

ವಿನಾಯಕ ಮಾಳದಕರ್ ನೇತೃತ್ವದಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದಲ್ಲಿ ನಾಳೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆ ಬಳಿಕ ಮಠಾಧೀಶರಿಂದಲೇ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ. ನೂತನ ಪಕ್ಷದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಕೂಡ ಇದೇ ವೇಳೆ ಜರುಗಲಿದೆ.

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಹಿಂದೂಸ್ಥಾನ ಜನತಾ ಪಾರ್ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾಗಿದ್ದು, ಬಿಜೆಪಿಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಈ ಹೊಸ ಪಕ್ಷವನ್ನು ಹುಟ್ಟುಹಾಕಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments