Tuesday, September 27, 2022
Google search engine
HomeUncategorizedBREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರ; ಮಧ್ಯಂತರ ಆದೇಶ ನೀಡಲು ಸುಪ್ರೀಂ ನಿರಾಕರಣೆ

BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರ; ಮಧ್ಯಂತರ ಆದೇಶ ನೀಡಲು ಸುಪ್ರೀಂ ನಿರಾಕರಣೆ

BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರ; ಮಧ್ಯಂತರ ಆದೇಶ ನೀಡಲು ಸುಪ್ರೀಂ ನಿರಾಕರಣೆ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್ ಆದೇಶದಂತೆ ಗಣೇಶೋತ್ಸವ ಆಚರಣೆಗೆ ಅವಕಾಶ ಮುಂದುವರೆದಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತು. ಆದರೆ ವಕ್ಫ್ ಮಂಡಳಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ದ್ವಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ಅಲ್ಲದೇ ವಾದ ಪ್ರತಿವಾದಗಳ ವೇಳೆ ವಕೀಲರ ಅಭಿಪ್ರಾಯ ಬೇರೆ ಬೇರೆ ರೀತಿ ಬಂದಿರುವ ಕಾರಣಕ್ಕೆ ಚಾಮರಾಜಪೇಟೆ ಮೈದಾನ ಅರ್ಜಿ ವಿಚಾರಣೆಯನ್ನು ಸುಪ್ರೀಂ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿದೆ. ಇಂದು ತ್ರಿಸದಸ್ಯಪೀಠ ಅರ್ಜಿ ವಿಚಾರಣೆಗೆ ಒಪ್ಪದಿದ್ದರೆ ನಾಳೆ ಹೈಕೋರ್ಟ್ ಆದೇಶದಂತೆ ಸರ್ಕಾರವೇ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments