Sunday, March 26, 2023
Google search engine
HomeUncategorizedBREAKING: ಜೈಲು ಸೇರಿದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಗ್ ಶಾಕ್: ಸಿಬಿಐ ಬಳಿಕ...

BREAKING: ಜೈಲು ಸೇರಿದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಗ್ ಶಾಕ್: ಸಿಬಿಐ ಬಳಿಕ ಇಡಿ ಅರೆಸ್ಟ್

BREAKING: ಜೈಲು ಸೇರಿದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಗ್ ಶಾಕ್: ಸಿಬಿಐ ಬಳಿಕ ಇಡಿ ಅರೆಸ್ಟ್

ನವದೆಹಲಿ: ಇಡಿ ಅಧಿಕಾರಿಗಳು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ.

ಸಿಬಿಐ ಬಳಿಕ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ತಿಹಾರ್ ಸೆಂಟ್ರಲ್ ಜೈಲಿನಲ್ಲಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅಬಕಾರಿ ನೀತಿ ಪರಿಷ್ಕರಣಿಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಈ ಮೊದಲು ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದರು.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅವರನ್ನು ಬಂಧಿಸಿದ ನಂತರ ಸಿಸೋಡಿಯಾ ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments