Thursday, August 11, 2022
Google search engine
HomeUncategorizedBREAKING: ಪರಿಷತ್ತಿನ ಒಂದು ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

BREAKING: ಪರಿಷತ್ತಿನ ಒಂದು ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

BREAKING: ಪರಿಷತ್ತಿನ ಒಂದು ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

ಬೆಂಗಳೂರು : ರಾಜ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ರಾಜಿನಾಮೆಯಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯಾದ ಶ್ರೀಮತಿ ವಿಶಾಲಾಕ್ಷಿ ಅವರು ಪ್ರಕಟಿಸಿದ್ದಾರೆ.

ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ದಿನಾಂಕ: 11-08-2022ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.

ಪರಿಷತ್ ನ ಒಂದು ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಕಣದಲ್ಲಿ ಯಾರು ಇಲ್ಲದ ಕಾರಣ ಏಕೈಕ ಅಭ್ಯರ್ಥಿಯಾಗಿದ್ದ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments