Friday, March 24, 2023
Google search engine
HomeUncategorizedBREAKING: ಬೆಂಗಳೂರಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ: ಗುಜರಿ ಗೋದಾಮುಗಳಿಗೆ ಬೆಂಕಿ

BREAKING: ಬೆಂಗಳೂರಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ: ಗುಜರಿ ಗೋದಾಮುಗಳಿಗೆ ಬೆಂಕಿ

BREAKING: ಬೆಂಗಳೂರಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ: ಗುಜರಿ ಗೋದಾಮುಗಳಿಗೆ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಗುಜರಿ ಗೋದಾಮುಗಳಿಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಮಾರ್ಷಲ್ ಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ನಾಯಂಡನಹಳ್ಳಿ ಬಳಿಯ ಪ್ರಮೋದ್ ಲೇಔಟ್ ನಲ್ಲಿರುವ ಗೋದಾಮುಗಳಲ್ಲಿ ಘಟನೆ ನಡೆದಿದೆ. ಬೆಂಕಿಯ ಅರ್ಭಟ ಕಂಡು ಮಾರ್ಷಲ್ ಗಳು ಸ್ಥಳಕ್ಕೆ ಓಡಿ ಬಂದಿದ್ದು, ಗೋದಾಮಿನಲ್ಲಿ ಮಲಗಿದ್ದ ಜನರನ್ನು ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಐದಾರು ಗೋದಾಮುಗಳಿಗೆ ಬೆಂಕಿ ಹೊತ್ತಿಕೊಂಡು ಅಪಾರ ಹಾನಿ ಸಂಭವಿಸಿದೆ. ಹಲವು ವಾಹನಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾರ್ಷಲ್ ಗಳು ಬೆಂಕಿ ಕಂಡ ಕೂಡಲೇ ಸ್ಥಳಕ್ಕೆ ಬಂದು ಅಲ್ಲಿ ಮಲಗಿದ್ದವರನ್ನು ಎಬ್ಬಿಸಿ ಕಳಿಸಿದ್ದಾರೆ, ಇದರಿಂದಾಗಿ ಯಾವುದೇ ಜೀವಹಾನಿಯಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments