Thursday, December 8, 2022
Google search engine
HomeUncategorizedBREAKING: ಮಂಗಳೂರು ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಓರ್ವ ವಶಕ್ಕೆ

BREAKING: ಮಂಗಳೂರು ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಓರ್ವ ವಶಕ್ಕೆ

BREAKING: ಮಂಗಳೂರು ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಓರ್ವ ವಶಕ್ಕೆ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಆಟೋದಲ್ಲಿದ್ದ ಕುಕ್ಕರ್ ಛಿದ್ರ ಛಿದ್ರಗೊಂಡಿತ್ತು. ಘಟನೆಯಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಇಬ್ಬರು ಗಾಯಗೊಂಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರಿಗೆ ಇದೊಂದು ಉಗ್ರರ ಕೃತ್ಯ ಎಂಬುದು ಬಯಲಾಗಿದೆ.

ಈ ಬೆಳವಣಿಗೆ ಬೆನ್ನಲ್ಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇದೀಗ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ನಡೆದ ಆಟೋ ಸ್ಫೋಟಕ್ಕೂ ಕೋಯಮತ್ತೂರಿನಲ್ಲಿ ನಡೆದ ಸ್ಫೋಟಕ್ಕೂ ಸಾಮ್ಯತೆ ಇರುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments