Sunday, September 25, 2022
Google search engine
HomeUncategorizedBREAKING: ಮುರುಘಾಶ್ರೀ ICUಗೆ ಸ್ಥಳಾಂತರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

BREAKING: ಮುರುಘಾಶ್ರೀ ICUಗೆ ಸ್ಥಳಾಂತರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

BREAKING: ಮುರುಘಾಶ್ರೀ ICUಗೆ ಸ್ಥಳಾಂತರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

BIGG NEWS : "ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ" ; ಆಪ್ತರೆದುರು 'ಮುರುಘಾಶ್ರೀ' ಮನದ ಇಂಗಿತ - Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ ...

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಎದೆನೋವಿನಿಂದ ಬಳಲುತ್ತಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವ ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ರಾತ್ರಿ ಬಂಧನಕ್ಕೀಡಾದ ಮುರುಘಾಶ್ರೀಗಳು ಇಂದು ಬೆಳಿಗ್ಗೆ ಎದೆನೋವಿನಿಂದ ಚಿತ್ರದುರ್ಗ ಕಾರಾಗೃಹದಲ್ಲಿಯೇ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರು ವೈದ್ಯರ ತಂಡದಿಂದ ಶ್ರೀಗಳ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಮುರುಘಾಶ್ರೀಗಳಿಗೆ ಹೃದಯ ಸಂಬಂಧಿ ಸಮಸ್ಯೆ ಇದ್ದು, ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಹೃದಯ ಸಂಬಂಧಿ ಸಮಸ್ಯೆ ಇರುವುದರಿಂದ ಇದೀಗ ಶ್ರೀಗಳನ್ನು ಜನರಲ್ ವಾರ್ಡ್ ನಿಂದ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಶ್ರೀಗಳನ್ನು ಆಸ್ಪತ್ರೆಯ ಐಸಿಯು ವಿಭಾಗಕ್ಕೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments