Breaking News: ನೂಪುರ್ ಶರ್ಮಾ ವಿರುದ್ಧ ಆಗಸ್ಟ್ 10 ರ ವರೆಗೆ ಯಾವುದೇ ಕ್ರಮ ಜರುಗಿಸದಂತೆ ‘ಸುಪ್ರೀಂ’ ಸೂಚನೆ
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದ ವಿವಿಧ ಭಾಗಗಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೂಪುರ್ ಶರ್ಮಾ ಬಂಧನಕ್ಕೆ ಪೊಲೀಸರು ಮುಂದಾಗಿದ್ದರು.
ಇದಕ್ಕೆ ತಡೆ ನೀಡಬೇಕೆಂದು ಕೋರಿ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಆಗಸ್ಟ್ 10 ರ ವರೆಗೆ ನೂಪುರ್ ಶರ್ಮಾ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಸುಪ್ರೀಂ ಸೂಚನೆ ನೀಡಿದೆ.
ಇದರಿಂದಾಗಿ ಬಂಧನಕ್ಕೊಳಗಾಗುವ ಭೀತಿಯಲ್ಲಿದ್ದ ನೂಪುರ್ ಶರ್ಮಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಈಗಾಗಲೇ ಪಶ್ಚಿಮ ಬಂಗಾಳ ಪೊಲೀಸರು ನೂಪುರ್ ಶರ್ಮಾ ಅವರನ್ನು ಬಂಧಿಸುವುದಾಗಿ ಹೇಳಿದ್ದು, ಇದೀಗ ಸುಪ್ರೀಂ ಆದೇಶದಿಂದಾಗಿ ನೂಪುರ್ ಶರ್ಮಾ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.