Breaking News: ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ

ಗುರುವಾರದಂದು ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಸೇರಿದಂತೆ ಐವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗುರುವಾರದ ದಾಳಿಯಲ್ಲಿ ಕಚೇರಿಯಲ್ಲಿ 40 ಲಕ್ಷ ರೂಪಾಯಿ ನಗದು ಹಾಗೂ ನಿವಾಸದಲ್ಲಿ ಕೋಟ್ಯಾಂತರ ರೂಪಾಯಿ ಸೇರಿದಂತೆ ಒಟ್ಟು 7.62 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಇದೀಗ ಲೋಕಾಯುಕ್ತ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ ವೇಳೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.