Friday, October 7, 2022
Google search engine
HomeUncategorizedShocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

Shocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

Shocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ.

ಇವರುಗಳು ರಸ್ತೆ ವಿಭಜಕದಲ್ಲಿ ಮಲಗಿದ್ದ ವೇಳೆ ಡಿಟಿಸಿ ಡಿಪೋವನ್ನು ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಇವರುಗಳ ಮೇಲೆ ಹರಿದಿದೆ. ಇದರ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಸಾವನ್ನಪ್ಪಿದವರನ್ನು 52 ವರ್ಷದ ಕರೀಂ, 25 ವರ್ಷದ ಚೋಟೆ ಖಾನ್, 38 ವರ್ಷದ ಶಾ ಆಲಂ ಮತ್ತು 45 ವರ್ಷದ ರಾಹುಲ್ ಎಂದು ಗುರುತಿಸಲಾಗಿದ್ದು, 16 ವರ್ಷದ ಮನೀಶ್ ಹಾಗೂ 30 ವರ್ಷದ ಪ್ರದೀಪ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments